Home » 93ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ದೇವೇಗೌಡ
 

93ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ದೇವೇಗೌಡ

ಪ್ರಧಾನಿ ಹಾಗೂ ಗಣ್ಯರಿಂದ ಶುಭ ಹಾರೈಕೆ

by Kundapur Xpress
Spread the love

ಬೆಂಗಳೂರು : ಭಾನುವಾರ 93ನೇ ವಸಂತಕ್ಕೆ ಪಾರ್ದಾಪಣೆ ಮಾಡಿದ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜ್ಯ ಹಾಗೂ ದೇಶಾದ್ಯಂತ ಹಲವು ಗಣ್ಯರು ಶುಭ ಹಾರೈಸಿದ್ದಾರೆ.

ಆರೋಗ್ಯಕರ ಜೀವನ ಕರುಣಿಸಲಿ

ಮೋದಿ ಹಾರೈಕೆ

ನಮ್ಮ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರು ತಮ್ಮ ಮುತ್ಸದ್ದಿತನ ಮತ್ತು ಸಾರ್ವಜನಿಕ ಸೇವೆಯಿಂದಾಗಿ ವ್ಯಾಪಕವಾಗಿ ಗೌರವಿಸಲ್ಪಡುತ್ತಾರೆ. ಹಲವಾರು ವಿಷಯಗಳ ಕುರಿತು ಅವರ ಜ್ಞಾನ ಮತ್ತು ಒಳನೋಟಗಳು ಹೆಚ್ಚಿನ ಶಕ್ತಿಯ ಮೂಲವಾಗಿದೆ. ದೇವರು ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಕರುಣಿಸಲಿ ಎಂದು ಪ್ರಧಾನಿ ಮೋದಿ ಅವರು ಹಾರೈಸಿದ್ದಾರೆ.

ಗೃಹ ಸಚಿವ ಅಮಿತ್ ಶಾ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಾಜ್ಯಪಾಲರಾದ ಥಾವರಚಂದ್ ಗೆಹೋಟ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಅನೇಕ ಗಣ್ಯರು ಮಾಜಿ ಪ್ರಧಾನಿಗಳಿಗೆ ಶುಭ ಕೋರಿದ್ದಾರೆ.

 

Related Articles

error: Content is protected !!