Home » ಬಿಜೆಪಿಯಿಂದ ಒಂದು ವಾರ ಧರ್ಮಯುದ್ದ ಪ್ರತಿಭಟನೆ
 

ಬಿಜೆಪಿಯಿಂದ ಒಂದು ವಾರ ಧರ್ಮಯುದ್ದ ಪ್ರತಿಭಟನೆ

by Kundapur Xpress
Spread the love

ಬೆಂಗಳೂರು : ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಹಾಗೂ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಶುಕ್ರವಾರದಿಂದ ಒಂದು ವಾರ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಧರ್ಮದ ಉಳಿವಿಗಾಗಿ ಧರ್ಮ ಯುದ್ಧ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ವಿಷಯ ತಿಳಿಸಿದರು. 

ಧರ್ಮಸ್ಥಳದ ವಿಚಾರವಾಗಿ ಉಪಮುಖ್ಯ ಡಿ.ಕೆ.ಶಿವಕುಮಾರ್ ಮಂತ್ರಿ ಮತ್ತು ಸಚಿವ ದಿನೇಶ್ ಗುಂಡೂ ರಾವ್ ಅವರು ನೀಡಿರುವ ಹೇಳಿಕೆಗಳು ಎಲ್ಲರಿಗೂ ತಿಳಿದಿದೆ. ಧರ್ಮಸ್ಥಳ ವಿರುದ್ಧ ಅಪಪ್ರಚಾರದ ವಿಚಾರವಾಗಿ ರಾಜ್ಯ ಸರ್ಕಾರದ ನಡವಳಿಕೆ ಬಗ್ಗೆ ನಮಗೂ ಅನುಮಾನಗಳು ಕಾಡುತ್ತಿವೆ ಎಂದರು.

ಕಳೆದ ಒಂದು ತಿಂಗಳಿಂದ ಧರ್ಮಸ್ಥಳ ವಿಚಾರದಲ್ಲಿ ಯಾವ ಯಾವ ಬೆಳವಣಿಗೆ ಆಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ ಎಂದರು

 

Related Articles

error: Content is protected !!