ಧರ್ಮಸ್ಥಳ : ರಾಜ್ಯ ಸರ್ಕಾರ ಯಶಸ್ವಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವರು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಹಾಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಿಎಂ, ಡಿಸಿಎಂ ಅವರ ಮೊದಲ ಧರ್ಮಸ್ಥಳ ಭೇಟಿ ಇದಾಗಿದೆ
ಧರ್ಮಸ್ಥಳ ಶ್ರೀಮಂಜುನಾಥನ ಸನ್ನಿಧಿಯಲ್ಲಿ ನಾಡಿನ ಒಳಿತಿಗಾಗಿ ವಿಶೇಷವಾಗಿ ಪ್ರಾರ್ಥಿಸಿದರು. ಬಳಿಕ ವಿಶೇಷ ಪೂಜೆ ನೆರವೇರಿಸಿದರು. ಈ ಸಂದರ್ಭ సీఎం, ಡಿಸಿಎಂ ಜೊತೆ ಸಚಿವರಾದ ಎಚ್.ಸಿ.ಮಹಾದೇವಪ್ಪ, ಕೆ.ವೆಂಕಟೇಶ್, ಬೈರತಿ ಸುರೇಶ್, ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್, ಸಂಜಯ್ ಸುರೇಶ್, ಎಂಎಲ್‌ಸಿ ಗೋವಿಂದರಾಜು ಮತ್ತಿತರಿದ್ದರು. ಬಳಿಕ ಬೀಡಿಗೆ ತೆರಳಿ ಅಲ್ಲಿ ರಾಜ್ಯಸಭಾ ಸದಸ್ಯರೂ ಆಗಿರುವ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು. ಡಾ.ಹೆಗ್ಗಡೆ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ಸ್ವಲ್ಪ ಹೊತ್ತು ಮಾತುಕತೆ ನಡೆಸಿದರು. ಈ ವೇಳೆ ಡಾ.ಹೆಗ್ಗಡೆ ಅವರು ರಾಜ್ಯ ಸರ್ಕಾರದ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು