154
ಬೆಂಗಳೂರು : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ನಿ ಉಷಾರೊಂದಿಗೆ ತೆರಳಿ ಪುಣ್ಯಸ್ನಾನ ಮಾಡಿದರು.
ಭಾನುವಾರ ಬೆಳಗ್ಗೆ ಬೆಂಗಳೂರಿನಿಂದ ತೆರಳಿದ ಡಿ.ಕೆ.ಶಿವಕುಮಾರ್ ಅವರನ್ನು ಉತ್ತರ ಪ್ರದೇಶದ ಕೈಗಾರಿಕಾ ಸಚಿವ ನಂದ ಗೋಪಾಲ ಗುಪ್ತಾ ಅವರು ಪ್ರಯಾಗ್‌ರಾಜ್ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡರು. ಬಳಿಕ ಶಿವಕುಮಾರ್ ಹಾಗೂ ಪತ್ನಿ ಉಷಾ ಅವರು ತ್ರಿವೇಣಿ ಸಂಗಮದಲ್ಲಿ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿ ಕೇಂದ್ರ ಶಿವಯೋಗಿಶ್ವರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಆರತಿ ಬೆಳಗಿ ವಿಶೇಷ ಪೂಜೆ ಸಲ್ಲಿಸಿದರು.

