ಬೆಂಗಳೂರು : ಮತಗಳ್ಳತನದ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶದ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ನಿಯೋಗ ಚುನಾವಣಾ ಆಯೋಗಕ್ಕೆ ತೆರಳಿ ಪಕ್ಷದ ಆರೋಪಗಳ ಸಂಬಂಧ ತನಿಖೆ ನಡೆಸಿ ತಪ್ಪಿತಸ್ಥರೆ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ.
ಮನವಿ ಸ್ವೀಕರಿಸಿದ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯಕ್ತ ಅನ್ಸುಕುಮಾರ್ ಅವರು ಈ ಆರೋಪ ಗಳಿಗೆ ದಾಖಲೆ ಸಹಿತ ಪ್ರಮಾಣಪತ್ರ ಸಲ್ಲಿಸುವಂತೆ ನಿಯೋಗಕ್ಕೆ ತಿಳಿಸಿದೆ ಎಂದು ತಿಳಿದುಬಂದಿದೆ.
ಪ್ರತಿಭಟನಾ ಸಭೆ ನಂತರ ಇಲ್ಲಿಗೆ ಸಮೀಪದಲ್ಲೇ ಇದ್ದ ಆಯೋಗದ ಕಚೇರಿಗೆ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವು ನಾಯಕರು ತೆರಳಿ ಮನವಿ ಸಲ್ಲಿಸಲು ಉದ್ದೇಶಿಸಲಾಗಿತ್ತು. ಇದಕ್ಕಾಗಿ ಮಧ್ಯಾಹ್ನ 1.00 ರಿಂದ 3.00 ರವರೆಗೆ ಸಮಯವನ್ನೂ ಆಯೋಗ ನೀಡಿತ್ತು.
ಸಭೆ ಮುಕ್ತಾಯದ ಬಳಿಕ ವೇದಿಕೆಯಲ್ಲೇ ಸ್ವತಃ ಡಿ.ಕೆ. ಶಿವಕುಮಾರ್ ಇದನ್ನು ಘೋಷಿಸಿದ್ದಲ್ಲದೆ, ಕೆಪಿಸಿಸಿ ವಾಟ್ಸ್ಅಪ್ ಗ್ರೂಪ್‌ನಲ್ಲಿ ಲೈವ್ ಲಿಂಕ್ ಕೂಡ ನೀಡಲಾಯಿತು. ಆದರೆ, ಕೊನೇ ಕ್ಷಣದಲ್ಲಿ ರಾಹುಲ್ ಗಾಂಧಿ ಮತ್ತು ಖರ್ಗೆ ಅವರು ಆಯೋಗದ ಕಚೇರಿಗೆ ಭೇಟಿ ನೀಡಲಿಲ್ಲ

