180
ನವದೆಹಲಿ : ರಾಜಧಾನಿ ಬೆಂಗಳೂರನ್ನು ಗಿಫ್ಟ್ ಸಿಟಿ ಎಂದು ಪರಿಗಣಿಸಿಲ್ಲ ಹಾಗಾಗಿ ನಗರದಲ್ಲಿ ಸುರಂಗ ರಸ್ತೆ, ಸಿಗ್ನಲ್ ಮುಕ್ತ ರಸ್ತೆ, ಪ್ರಮುಖ ರಸ್ತೆ ಹಾಗೂ ಮಳೆ ನೀರುಗಾಲುವೆಗಳ ಅಭಿವೃದ್ಧಿಗೆ ಮತ್ತು ರಾಜ್ಯದ ನೀರಾವರಿಗೆ ಹೆಚ್ಚಿನ ಅನುದಾನ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ನಗರದಲ್ಲಿ ಬುಧವಾರ ಪ್ರಧಾನಿ ಮೋದಿ ಅವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಅದರಲ್ಲೂ ನೀರಾವರಿಗೆ ಸ್ವಲವೂ ಅನುದಾನ ಬಂದಿಲ್ಲವೆಂದು ಪ್ರಧಾನಿ ಗಮನಕ್ಕೆ ತರುವ ಉದ್ದೇಶದಿಂದ ಭೇಟಿ ಮಾಡಲಾಗಿದೆ ಎಂದರು

