ಬೆಂಗಳೂರು : ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಉರುಳು ಮಾಜಿ ಸಚಿವ ಬಿ.ನಾಗೇಂದ್ರ, ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ಗೆ ಬಲವಾಗಿ ಸುತ್ತಿಕೊಳ್ಳುತ್ತಿದ್ದು, ಅವರಿಬ್ಬರಿಗೆ ಸೇರಿದ ಸ್ಥಳಗಳು ಸೇರಿದಂತೆ ಯೂನಿಯನ್ ಬ್ಯಾಂಕ್ ಸಿಬ್ಬಂದಿ ನಿವಾಸ, ಕಚೇರಿ ಸೇರಿ 18 ಕಡೆ ಏಕಕಾಲಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. ಮಂಗಳವಾರವಷ್ಟೇ ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದ ಬಸನಗೌಡ ದದ್ದಲ್, ನಾಗೇಂದ್ರ ಅವರ ನಿವಾಸಗಳ ಮೇಲೆ ಬುಧವಾರ ಇ.ಡಿ. ಕಾರ್ಯಾಚರಣೆ ಕೈಗೊಂಡಿದೆ
ಇದೇ ವೇಳೆ ನಾಗೇಂದ್ರ ಆಪ್ತ ಸಹಾಯಕ ಹರೀಶ್‌ನನ್ನು ಇ.ಡಿ. ಅಧಿಕಾರಿಗಳು ವಶಕ್ಕೆ ಪಡೆದು ವಿಚಾ ರಣೆಗೊಳಪಡಿಸಿ ರಾತ್ರಿ ವಾಪಸ್ ಕಳುಹಿಸಿದರು ಬಳ್ಳಾರಿಯಲ್ಲಿ ನಾಗೇಂದ್ರ ಅವರ ಆಪ್ತ ಸಹಾಯಕರಾದ ವಿಜಯ್‌ಕುಮಾರ್ ಮತ್ತು ಚೇತನ್ ಅವರನ್ನು ಹಾಗೂ ನಾಗೇಂದ್ರ ಅವರನ್ನುಮನೆಯಲ್ಲಿಯೇ ಸುದೀರ್ಘ ವಿಚಾರಣೆಯನ್ನು ಇಡಿ ಅಧಿಕಾರಿಗಳು ನಡೆಸಿದರು.