212
ಬೆಂಗಳೂರು : ಕಳೆದ ತಿಂಗಳು ದಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೀಡಿದ್ದ ನೋಟಿಸ್ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಗೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಹಾಜರಾಗಿದ್ದಾರೆ.
ಜೂ.23ರಂದು ಅನಂತ್ ಕುಮಾರ್ ಹೆಗಡೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬರುವ ವೇಳೆ ಸೋಂಪುರ ಹೋಬಳಿಯ ಹಳೇ ನಿಜಗಲ್ ಬಳಿ ಕಾರು ಓವರ್‌ಟೇಕ್ ವಿಚಾರದಲ್ಲಿ ಗಲಾಟೆ ನಡೆದಿತ್ತು.

