Home » ಚಿನ್ನ ಸ್ಮಗ್ಲರ್‌ ರನ್ಯಾ ರಾವ್‌ 34 ಕೋಟಿ ಆಸ್ತಿ ಮುಟ್ಟುಗೋಲು
 

ಚಿನ್ನ ಸ್ಮಗ್ಲರ್‌ ರನ್ಯಾ ರಾವ್‌ 34 ಕೋಟಿ ಆಸ್ತಿ ಮುಟ್ಟುಗೋಲು

ಬೆಂಗಳೂರಿನ 2 ಮನೆ ಆನೇಕಲ್‌ ಜಾಗ ಇಡಿ ವಶ

by Kundapur Xpress
Spread the love

ಬೆಂಗಳೂರು : ವಿದೇಶದಿಂದ ಚಿನ್ನ ಕಳ್ಳಸಾಗಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು (ಇ.ಡಿ.) ಪ್ರಮುಖ ಆರೋಪಿ ಹರ್ಷವರ್ಧಿನಿ ರನ್ಯಾ ಅಲಿಯಾಸ್ ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ರು. ಮೌಲ್ಯದ ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಆರೋಪಿ ರನ್ಯಾಗೆ ಸೇರಿದ ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಕಳೆದ ಮಾರ್ಚ್ 3ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡು ವಿದೇಶದಿಂದ 12.56 ಕೋಟಿ ರುಪಾಯಿ ಮೌಲ್ಯದ 14 ಕೆ.ಜಿ. 213 ಗ್ರಾಂ. ಚಿನ್ನಾಭರಣವನ್ನು ಕಳ್ಳ ಸಾಗಣೆ ಮಾಡುತ್ತಿದ್ದ ನಟಿ ರನ್ಯಾ ರಾವ್ ಅವರನ್ನು ಬಂಧಿಸಿದ್ದರು. ಬಳಿಕ ಆಕೆಯ ನಿವಾಸದ ಮೇಲೆ ದಾಳಿ ಮಾಡಿದಾಗ 2.67 ಕೋಟಿ ರು. ದಾಖಲೆ ಇಲ್ಲದ ನಗದು ಮತ್ತು 2.06 ಕೋಟಿ ರು. ಮೌಲ್ಯದ ಚಿನ್ನಾಭರಣಗಳು ಪತ್ತೆಯಾಗಿದ್ದವು. 

 

Related Articles

error: Content is protected !!