ಬೆಂಗಳೂರು : ವಿದೇಶದಿಂದ ಚಿನ್ನ ಕಳ್ಳಸಾಗಣೆ ವೇಳೆ ಬಂಧಿತ ನಟಿ ರನ್ಯಾ ರಾವ್ ಪ್ರಕರಣ ಇದೀಗ ಮಹತ್ವದ ತಿರುವು ನೀಡಿದೆ. ‘ನಾನು ಟ್ರ್ಯಾಪ್ ಗೊಳಗಾಗಿದ್ದೆ ಎಂದು ನಟಿ ರನ್ಯಾ ಹೇಳಿಕೆ ನೀಡಿದ್ದು, ಹೀ ಗಾಗಿ ಟ್ರ್ಯಾಪ್ ನ ಹಿಂದಿರುವ ಹ್ಯಾಂಡ್ಲರ್‌ಗಳಿಗಾಗಿ ಇದೀಗ ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯದ (డిఆరోఇ) ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ.
ಪ್ರಕರಣದಲ್ಲಿ ಬಂಧನ ಬಳಿಕ ವಿಶೇಷ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದ ವೇಳೆ ‘ನಾನು ಟ್ರ್ಯಾಪ್‌ಗೊಳಗಾಗಿದ್ದೇನೆ. ನನ್ನದೇನೂ ತಪ್ಪಿಲ್ಲ ಎಂದು ನಟಿ ರನ್ಯಾ ಅಲವತ್ತು ಕೊಂಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಕಾರ್ಯಾಚರಣೆ ಚುರುಕುಗೊಳಿಸಿರುವ ಡಿಆರ್‌ಐ ಅಧಿಕಾರಿಗಳು ನಟಿ ಸಂಪರ್ಕ ಜಾಲದ ಕುರಿತು ಶೋಧ ಆರಂಭಿಸಿದೆ.
ನಟಿ ರನ್ಯಾ ನಿಜಕ್ಕೂ ವಂಚಕರ ಜಾಲಕ್ಕೆ ಸಿಲುಕಿದ್ದಳೇ ಅಥವಾ ಹಣದಾಸೆಗೆ ಚಿನ್ನ ಕಳ್ಳ ಸಾಗಣೆಗೆ ಆಕೆಯೇ ಸಾಥ್ ನೀಡಿದ್ದಾಳೆಯೇ ಎಂಬುದು ತನಿಖೆ ನಂತರವಷ್ಟೇ ಸ್ಪಷ್ಟವಾಗಬೇಕಿದೆ. ಪ್ರಕರಣದಲ್ಲಿ ತಾನು ಮುಗ್ಧ ಎನ್ನುವಂತೆ ಆಕೆ ಬಿಂಬಿಸಲು ಪ್ರಯತ್ನಿಸುತ್ತಿರಲೂಬಹುದು. ಟ್ರ್ಯಾಪ್ ಎಂದಿರುವ ಕಾರಣಕ್ಕೆ ಆಕೆಯನ್ನು ವಿಚಾರಣೆ ನಡೆಸಲು ಕಸ್ಟಡಿಗೆ ನೀಡುವಂತೆ ಡಿಆರ್‌ಇ ಮೂಲಕ ಕೋರ್ಟ್‌ಗೆ ಕೋರಲಾಗಿದೆ ಎಂದು ಮೂಲಗಳು ಹೇಳಿವೆ.

