Home » ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ
 

ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ

: ಡಿಸಿಎಂ ಡಿ.ಕೆ ಶಿವಕುಮಾರ್

by Kundapur Xpress
Spread the love

ಬೆಂಗಳೂರು : ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಹಿಂದಕ್ಕೆ ಪಡೆಯುತ್ತದೆ ಎಂದು ಮೋದಿ ಅವರನ್ನು ಪ್ರಧಾನಮಂತ್ರಿ ಕಚೇರಿ ದಾರಿ ತಪ್ಪಿಸಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾ‌ರ್ ತಿಳಿಸಿದರು.

ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯಿಂದ ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಕೆಟ್ಟ ರಾಜಕೀಯ ಗಿಮಿಕ್ ನಡೆಯುತ್ತಿದೆ. ದೇಶದ ಉನ್ನತ ಕಚೇರಿಯು ಇಂತಹ ಸುಳ್ಳು ಹರಡಬಾರದು. ಬಿಜೆಪಿಯು ಅನೇಕ ರಾಜ್ಯಗಳಲ್ಲಿ ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿದೆ ಎಂದು ತಿರುಗೇಟು ನೀಡಿದರು

ಗ್ಯಾರಂಟಿ ಯೋಜನೆಗಳ ವಿರುದ್ಧ ಪ್ರಧಾನಿ ಮೋದಿ ಅವರ ಎಕ್ಸ್ ನಲ್ಲಿ ಹೇಳಿಕೆ ಬಗ್ಗೆ ಉತ್ತರಿಸಿದ ಅವರು, ಕಾಂಗ್ರೆಸ್ ಕಳೆದ 60 ವರ್ಷಗಳಲ್ಲಿ ನೀಡಿದ ಯಾವುದೇ ಯೋಜನೆಗಳನ್ನು ಹಿಂದಕ್ಕೆ ಪಡೆದ ಇತಿಹಾಸವಿಲ್ಲ. ಉಳುವವನಿಗೆ ಭೂಮಿ, ಪಿಂಚಣಿ ಯೋಜನೆ, ನರೇಗಾ ಸೇರಿದಂತೆ ಅನೇಕ ಯೋಜನೆಗಳು ಈಗಲೂ ಚಾಲ್ತಿಯಲ್ಲಿವೆ ಎಂದರು.

ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ಗುರಿಯಾಗಿಟ್ಟುಕೊಂಡು ಈ ಹೇಳಿಕೆ ನೀಡಲಾಗಿದೆಯೇ ಎಂದು ಕೇಳಿದಾಗ ಕಾಂಗ್ರೆಸ್ ಪಕ್ಷವು ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂಬುದು ಪ್ರಧಾನಿಯವರಿಗೆ ಅರಿವಾಗಿದೆ. ಆದ ಕಾರಣಕ್ಕೆ ಅನವಶ್ಯಕ ವಾಗ್ದಾಳಿ ನಡೆಸುತ್ತಿದ್ದಾರೆ ಎಂದರು.

   

Related Articles

error: Content is protected !!