ಮಂಡ್ಯ : ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದ ಹಗರಣ ಬಯಲಾಗಿದೆ. ಮುಖ್ಯಮಂತ್ರಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ಸಿಗರಿಂದಲೇ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರ ಸ್ವಾಮಿ ಹೊಸ ‘ಬಾಂಬ್’ ಸಿಡಿಸಿದ್ದಾರೆ
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಹಾಗೂ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ ? ಇದರ ಹಿಂದೆ ಮುಖ್ಯಮಂತ್ರಿ ಕುರ್ಚಿ ಮೇಲೆ ಟವೆಲ್ ಹಾಕಿರುವವರ ಪಾತ್ರ ಇದೆ. ಈಗಿನ ಮುಖ್ಯಮಂತ್ರಿ ತೆಗೆದು ತಾವು ಆ ಸ್ಥಾನದಲ್ಲಿ ಕೂರಬೇಕೆಂದು ಕಾಯುತ್ತಿದ್ದಾರೆ. ಅವರು ಸಿದ್ದರಾಮಯ್ಯ ಅವರ ಇಮೇಜ್ ಹಾಳು ಮಾಡಲು ಕಾರ್ಯತಂತ್ರ ರೂಪಿಸಿದ್ದಾರೆ. ಸಿ.ಡಿ. ಫ್ಯಾಕ್ಟರಿ ಬಂದ್ ಆಯ್ತು, ಈಗ ಮುಡಾ ಫ್ಯಾಕ್ಟರಿ ‘ಶುರುವಾಯ್ತು ಎಂದು ಲೇವಡಿ ಮಾಡಿದರು.