ಬೆಂಗಳೂರು : ಹಳೇ ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ (ಎಚ್‌ಎಸ್ಆರ್‌ಪಿ) ಅಳವಡಿಕೆ ಗಡುವನ್ನು ನ.30ಕ್ಕೆ ನಿಗದಿ ಮಾಡಿ ಸಾರಿಗೆ ಇಲಾಖೆ ಆದೇಶಿಸಿದೆ. 2019ರ ಏ.1ಕ್ಕಿಂತ ಹಿಂದೆ ನೋಂದಣಿಯಾದ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಕೆಯನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಅದರಂತೆ ರಾಜ್ಯದಲ್ಲಿ 2 ಕೋಟಿ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕಿದೆ. ಈವರೆಗೆ 50 ಲಕ್ಷ ವಾಹನಗಳು ಮಾತ್ರ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಂಡಿದ್ದು, ಇನ್ನೂ 1.50 ಕೋಟಿ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕಿದೆ. ಎಚ್‌ಎಸ್‌ಆರ್‌ಪಿ ಅಳವಡಿಕೆ ಅಂತಿಮ ಗಡುವನ್ನು ಸಾರಿಗೆ ಇಲಾಖೆ ಈಗಾಗಲೇ ನಾಲ್ಕು ಬಾರಿ ವಿಸ್ತರಿಸಿದೆ. ಇದೀಗ ಮತ್ತೊಮ್ಮೆ ಗಡುವು ವಿಸ್ತರಿಸಲಾಗಿದ್ದು, ನ. 30ರೊಳಗೆ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಹೊಸ ಗಡುವು ನಿಗದಿ ಮಾಡಿ ಸಾರಿಗೆ ಇಲಾಖೆ ಆದೇಶಿಸಿದೆ.