95
ಬೆಂಗಳೂರು : ಕನ್ನಡದ ಹೆಸರಾಂತ ಸಾಹಿತಿ, ಭಾವ ಕವಿ ಡಾ.ಎಚ್.ಎಸ್.ವೆಂಕಟೇಶ್ ಮೂರ್ತಿ ಅವರು ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಕೆಂಗೇರಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಅವರ ನಿಧನದೊಂದಿಗೆ ಕನ್ನಡ ಸಾಹಿತ್ಯಲೋಕ ಓರ್ವ ಶ್ರೇಷ್ಠ ಕವಿಯನ್ನು ಕಳೆದುಕೊಂಡಿದೆ. ಕನ್ನಡ ಸಾಹಿತ್ಯ ಲೋಕದಲ್ಲಿ ಎಚ್.ಎಸ್.ವಿ. ಎಂದೇ ಜನಪ್ರಿಯರಾಗಿದ್ದ ಡಾ. ಎಚ್.ಎಸ್.ವೆಂಕಟೇಶಮೂರ್ತಿ ಅವರು ಕಳೆದ ಎರಡು ವರ್ಷಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರಿಗೆ ನಾಲ್ವರು ಪುತ್ರರಿದ್ದಾರೆ.
ನಗರದ ರವೀಂದ್ರ ಕಲಾಕ್ಷೇತ್ರ ಹಿಂಭಾಗದ ಸಂಸ ಬಯಲು ರಂಗಮಂದಿರದಲ್ಲಿ ಎಚ್.ಎಸ್. ವೆಂಕಟೇಶಮೂರ್ತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಅವರ ಅಂತಿಮ ದರ್ಶನ ಪಡೆದರು

