ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ಬಾಮೈದುನ ಮಲ್ಲಿಕಾರ್ಜುನ ಸ್ವಾಮಿಗೆ ಹ್ಯಾಂಡ್ ಸಮನ್ಸ್ ನೀಡಲು ಅರ್ಜಿದಾರ ಸ್ನೇಹಮಯಿ ಕೃಷ್ಣ ಅವರಿಗೆ ಹೈಕೋರ್ಟ್ ನಿರ್ದೇಶಿಸಿದೆ
ಸಿಎಂ ವಿರುದ್ಧ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ದೂರುದಾರ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮಂಗಳವಾರ ವಿಚಾರಣೆ ನಡೆಸಿತು
ಈ ಮೊದಲು ನ್ಯಾಯಪೀಠ ಸೂಚನೆ ಮೇರೆಗೆ ಪ್ರಕರಣ ಸಂಬಂಧ ಡಿ.9 ರವರೆಗೆ ನಡೆಸಿರುವ ತನಿಖೆಯ ವಸ್ತುಸ್ಥಿತಿ ವರದಿಯನ್ನು ಲೋಕಾಯುಕ್ತ ಪೊಲೀಸರು ನ್ಯಾಯಪೀಠಕ್ಕೆ ಸಲ್ಲಿಸಿದರು. ಅದೇ ರೀತಿ ಪ್ರಕರಣದಲ್ಲಿ ಸಾಕ್ಷಿಗಳನ್ನು ಒಳಗೊಂಡ ದಾಖಲೆಗಳನ್ನು ಸಲ್ಲಿಸಲಾಗಿದ್ದು, ಮುಂದಿನ ವಿಚಾರಣೆಯನ್ನು ಡಿ.19 ರಂದು ಮುಂದೂಡಿದೆ.