ಹಾಸನ : ಅಕ್ಟೋಬರ್ 9ರಂದು ಹಾಸನಾಂಬೆ ದೇವಾಲಯದ ಬಾಗಿಲು ತೆರೆಯಲಾಗುವುದು, 23 ರಂದು ದೇವಾಲಯದ ಬಾಗಿಲು ಮುಚ್ಚಲಾಗುವುದು ಒಟ್ಟು 13 ದಿನಗಳ ಕಾಲ ದೇವಿ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡ ಹೇಳಿದರು.
ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ನಡೆದ ಶ್ರೀ ಹಾಸನಾಂಬ ದೇವಿ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ಕುರಿತು ನಡೆದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಉದಾಸೀನ ಮಾಡದೇ ಬಹಳ ಎಚ್ಚರಿಕೆಯಿಂದ ಸಣ್ಣ ತಪ್ಪು ಕೂಡ ದೊಡ್ಡದಾಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದರು
ಭಕ್ತಾದಿಗಳಿಗೆ ಕುಡಿಯುವ ನೀರು, ಶೌಚಾಲಯ, ವಾಹನ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ, ಪ್ರಸಾದ ವಿತರಣೆ, ಭಕ್ತಾದಿಗಳು ದೇವಿ ದರ್ಶನಕ್ಕೆ ಸರತಿ ಸಾಲಿನಲ್ಲಿ ಸಾಗಲು ಅನುಕೂಲವಾಗುವಂತೆ ಬ್ಯಾರಿಕೇಡ್ ವ್ಯವಸ್ಥೆಗೆ ಕ್ರಮವಹಿಸಲು ಸೂಚನೆ ನೀಡಿದರು. ಜನಸಂದಣಿ ಆಗದಂತೆ ಎಚ್ಚರಿಕೆ ವಹಿಸಿ ಶಾಂತ ರೀತಿಯಲ್ಲಿ ನಿರ್ವಹಣೆ ಮಾಡಲು ನಿಗಾವಹಿಸಬೇಕು ಎಂದು ತಿಳಿಸಿದರು.
ಹಾಸನಾಂಬ ಜಾತ್ರಾ ಮಹೋತ್ಸವ ಜಿಲ್ಲೆಯ ಗೌರವದ ಪ್ರತೀಕ ರಾಜ್ಯದ ಮೂಲೆ ಮೂಲೆಗಳಿಂದ ಹಾಗೂ ಹೊರ ರಾಜ್ಯಗಳಿಂದಗಳಿದಲೂ ಭಕ್ತಾಧಿಗಳು ದೇವಿಯ ದರ್ಶನಕ್ಕೆ ಆಗಮಿಸುವುದರಿಂದ ಪ್ರತಿಯೋಬ್ಬರು ಅತ್ಯುತ್ತಮವಾಗಿ ನಿರ್ವಹಣೆ ಮಾಡುವುದರ ಮೂಲಕ ಜಿಲ್ಲೆಗೆ ಉತ್ತಮ ಹೆಸರು ತರುವಂತೆ ನಡೆದುಕೊಳ್ಳಬೇಕು ಎಂದು ಸೂಚಿಸಿದರು

