ಬೆಂಗಳೂರು : ಗ್ರಾಮೀಣ ಭಾಗದ ಜನರು ತಮ್ಮ ಆರೋಗ್ಯದ ಕಾಳಜಿಗೆ ಹೆಚ್ಚು ಗಮನಹರಿಸದ ಹಿನ್ನೆಲೆ ಆರೋಗ್ಯ ಇಲಾಖೆ ಮನೆಗಳಿಗೆ ತೆರಳಿ ಜನರ ಅಸಾಂಕ್ರಾಮಿಕ ರೋಗಗಳ ತಪಾಸಣೆ ನಡೆಸುವುದರ ಜತೆಗೆ ಮನೆಗೆ ಉಚಿತವಾಗಿ ಔಷಧಿಗಳನ್ನು ಪೂರೈಸಲು ಸಜ್ಜಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗುರುವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣ ದಲ್ಲಿ ದೀಪ ಬೆಳಗಿಸುವ ಮೂಲಕ ರಾಜ್ಯ ಸರ್ಕಾರದ ಮಹತ್ವದ ಗೃಹ ಆರೋಗ್ಯ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಇದೀಗ ದೇಶದಲ್ಲಿ ಶೇ.25ರಷ್ಟು ರಕ್ತದೊತ್ತಡ ಹಾಗೂ ಶೇ.15.6ರಷ್ಟು ಮಧುಮೇಹದಿಂದ ಜನರು ಬಳಲುತ್ತಿದ್ದಾರೆ. ಈ ಸಂಖ್ಯೆ ಹೆಚ್ಚು ಇರಬಹುದು. ಏಕೆಂದರೆ ಬಹುತೇಕ ಗ್ರಾಮೀಣ ಭಾಗದ ಜನರು ತಪಾಸಣೆಯನ್ನೇ ಮಾಡಿಸಿಕೊಂಡಿರುವುದಿಲ್ಲ ಹೀಗಾಗಿ ಆರೋಗ್ಯ ಇಲಾಖೆ ಮನೆ ಮನೆಗೆ ಉಚಿತವಾಗಿ ಔಷಧಿ ಗಳನ್ನು ಪೂರೈಸುತ್ತಿದೆ ಎಂದು ಸಿದ್ದರಾಮಯ್ಯ ನುಡಿದರು