ಬೆಂಗಳೂರು : 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟ ಘಟನೆ ಚಾಮರಾಜನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಬದನಗುಪ್ಪೆಯ ಗ್ರಾಮದ ಲಿಂಗರಾಜು, ಶೃತಿ ದಂಪತಿಯ ಪುತ್ರಿ ತೇಜಸ್ವಿನಿ (8 ವರ್ಷ) ಎಂದು ತಿಳಿದು ಬಂದಿದೆ
ಬಾಲಕಿ ಬೆಳಗ್ಗೆ ಶಾಲೆಗೆ ಹೋಗಿದ್ದಳು ತರಗತಿಯಲ್ಲಿ ಶಿಕ್ಷಕರಿಗೆ ನೋಟ್ಸ್ ತೋರಿಸಲು ಹೋಗುತ್ತಿದ್ದಂತೆ ವಿದ್ಯಾರ್ಥಿನಿ ಹೃದಯ ಸ್ತಂಭನದಿಂದ ಕುಸಿದು ಬಿದ್ದಿದ್ದಾಳೆ. ಕುಸಿದು ಬಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಕರು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲೇ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ