109
ಹಾಸನ : ಜಿಲ್ಲೆಯಲ್ಲಿ ಹೃದಯಾಘಾತದ ಸರಣಿ ಸಾವಿಗೆ ಅತಿಯಾದ ರೆಡ್ ಮೀಟ್ (ಕುರಿ, ಆಡು, ಹಂದಿ ಮಾಂಸ) ಸೇವನೆ ಕಾರಣ ಎನ್ನುವ ಮಾತು ಕೇಳಿ ಬರುತ್ತಿದೆ. ಜೀವನ ಶೈಲಿ ಬದಲಾಗಬೇಕು. ಜಿಲ್ಲೆಯಲ್ಲಿ ಬಾರ್‌ಗಳ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಮದ್ಯ ಸೇವನೆ ಕೂಡ ಹೆಚ್ಚಾಗಿದೆ. ಇದೆಲ್ಲವೂ ಹೃದಯಾಘಾತ ಹೆಚ್ಚಾಗಲು ಕಾರಣವಾಗಿದೆ’ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಸರಣಿ ಸಾವಿನ ಬಗ್ಗೆ ನಗರದ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿ, ಸರ್ಕಾರಕ್ಕೆ ಹೆಚ್ಚು ಆದಾಯ ಬರುತ್ತದೆ ಎಂದು ಜಿಲ್ಲೆಯಲ್ಲಿ ಮದ್ಯದಂಗಡಿ ಹೆಚ್ಚಾಗಿ ತೆರೆಯಲು ಅನುಮತಿ ನೀಡಲಾಗಿದೆ. ಸುಲಭವಾಗಿ ಮದ್ಯ ಸಿಗುತ್ತಿದ್ದು, ಕುಡಿಯುವವರ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ ಎಂದರು.

