ಬೆಳಗಾವಿ : ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಖಾಸಗಿ ಆಸ್ಪತ್ರೆಯಲ್ಲಿ 2ನೇ ದಿನವೂ ಚಿಕಿತ್ಸೆ ಮುಂದುವರಿದಿದೆ.
ಅಪಘಾತದಲ್ಲಿ ಸಚಿವರ ಬೆನ್ನುಹುರಿಗೆ ಪೆಟ್ಟಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ವೈದ್ಯ ಡಾ.ರವಿ ಪಾಟೀಲ ತಿಳಿಸಿದ್ದಾರೆ.
ವೈದ್ಯರ ಸಲಹೆ ಮೇರೆಗೆ ಲಕ್ಷ್ಮೀ ಹೆಬ್ಬಾಳ್ಳರ್ ಮಂಗಳವಾರ ಇಡೀ ದಿನ ಜ್ಯೂಸ್ ಸೇವಿಸಿದ್ದಾರೆ ಬುಧವಾರ ಆಸ್ಪತ್ರೆಗೆ ಹೆಬ್ಬಾಕ್ಟರ್ ಪುತ್ರ ಮೃಣಾಲ್ ಮತ್ತು ಸೊಸೆ ಹಿತಾ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಅಲ್ಲದೇ ಹರಿಹರದ ಪಂಚಮಸಾಲಿ ಪೀಠದ ವಚನಾಂದ ಸ್ವಾಮೀಜಿ ಅವರು ಕೂಡ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ