ಬೆಳಗಾವಿ : ಕಿತ್ತೂರು ಚನ್ನಮ್ಮನ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಗಾಯಗೊಂಡು 13 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಭಾನುವಾರ ಆಸತ್ರೆಯಿಂದ ಬಿಡುಗಡೆ ಮಾಡಲಾಯಿತು.
ಲಕ್ಷ್ಮೀ ಹೆಬ್ಬಾಳ್ಳರ್ ಪ್ರಯಾಣಿಸುತ್ತಿದ್ದ ಕಾರಲ್ಲಿ ಹಣವಿತ್ತು ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವೆ, ಕಲ್ಲು ಹೃದಯದವರು, ಹೃದಯ ಇಲ್ಲದವರಿಗೆ ಉತ್ತರ ಕೊಡಲ್ಲ ಸಾವಿನಲ್ಲೂ ರಾಜಕೀಯ ಮಾಡುವವರಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು
ನನಗಿದು ಪುನರ್ಜನ್ಮ
ರಸ್ತೆ ಅಪಘಾತದಲ್ಲಿ ಬದುಕಿ ಬಂದಿದ್ದು ನನಗೆ ಪುನರ್ಜನ್ಮ ಬಂದಂತಾಗಿದೆ. ವೈದ್ಯರು ಮೂರು ವಾರ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಆದರೆ ಸಚಿವೆಯಾಗಿ ನನಗೂ ಜವಾಬ್ದಾರಿ ಇದೆ. ಮಾರ್ಚ್ ತಿಂಗಳಲ್ಲಿ ಬಜೆಟ್ ಇದೆ ಆದಷ್ಟು ಬೇಗ ಸಾರ್ವಜನಿಕ ಜೀವನಕ್ಕೆ ಮರಳುತ್ತೇನೆ ಎಂದರು