Home » ರಾಜ್ಯ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್‌
 

ರಾಜ್ಯ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್‌

ಅಕ್ರಮ ಮದ್ಯಕ್ಕೆ ಕಡಿವಾಣ ಹಾಕಲು ವಿಫಲ

by Kundapur Xpress
Spread the love

ಬೆಂಗಳೂರು : ರಾಜ್ಯ ದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ವಿಫಲವಾಗಿರುವ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.

ರಾಜ್ಯದ ವಿವಿಧೆಡೆ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವ ಸಂಬಂಧ ಅಗತ್ಯ ಕ್ರಮ ಜರುಗಿಸಲು ಹೈಕೋರ್ಟ್ ನೀಡಿರುವ ಆದೇಶ ಪಾಲಿಸಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ‘ಕರ್ನಾಟಕ ಮದ್ಯ ನಿಷೇಧ ಆಂದೋಲನ’ದ ಸದಸ್ಯೆ ಸುಧಾ ಕಾಟ್ಟಾ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿದಾರರ ವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯ ಪೀಠ, ಅರ್ಜಿಯಲ್ಲಿ ಆರೋಪಿಗಳಾಗಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಕಟಾರಿಯಾ, ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಹನುಮನರಸಯ್ಯ, ಅಬಕಾರಿ ಆಯುಕ್ತ ರವಿಶಂಕರ್‌ಗೆ ನೋಟಿಸ್ ಜಾರಿಗೊಳಿಸಿದೆ

 

Related Articles

error: Content is protected !!