Home » ಬಂಧನ ಭೀತಿಯಿಂದ ಯಡಯೂರಪ್ಪ ನಿರಾಳ
 

ಬಂಧನ ಭೀತಿಯಿಂದ ಯಡಯೂರಪ್ಪ ನಿರಾಳ

by Kundapur Xpress
Spread the love

ಬೆಂಗಳೂರು : ಅಪ್ರಾಪ್ತಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸಿಐಡಿ ಪೊಲೀಸರಿಂದ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಪ್ರಕರಣ ಸಂಬಂಧ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಸಿಐಡಿ ಪೊಲೀಸರಿಗೆ ನಿರ್ದೇಶಿಸಿ ಹೈಕೋರ್ಟ್ ಶುಕ್ರವಾರ ಮಧ್ಯಂತರ ಆದೇಶ ಮಾಡಿದೆ. ಇದರಿಂದ ಬಂಧನ ಭೀತಿಯಿಂದ ಯಡಿಯೂರಪ್ಪ ಅವರು ಪಾರಾಗಿದ್ದಾರೆ.

ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ಸೂಚಿಸಿ ಸಿಐಡಿ ಪೊಲೀಸರು ಎರಡನೇ ನೋಟಿಸ್ ಜಾರಿ ಮಾಡಿದ ಮತ್ತು ನಗರದ 1ನೇ ತ್ವರಿತಗತಿ ನ್ಯಾಯಾಲಯ (ಪೋಕ್ರೋ ವಿಶೇಷ ನ್ಯಾಯಾಲಯ) ಜಾಮೀನುರಹಿತ ಬಂಧನ ವಾರಂಟ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಬಂಧನದ ಭೀತಿ ಎದುರಿಸುತ್ತಿದ್ದು ಆತಂಕಕ್ಕೆ ಒಳಗಾಗಿದ್ದರು 

   

Related Articles

error: Content is protected !!