ಬೆಂಗಳೂರು : 2019ಕ್ಕಿಂತ ಮೊದಲು ನೊಂದಣಿಯಾದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು, ನಿರ್ದಿಷ್ಟ ಡೀಲರ್‌ಗಳಿಗೆ ಮಾತ್ರ ಸರ್ಕಾರ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ.20ಕ್ಕೆ ಮುಂದೂಡಿದೆ. ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ.ಕಾಮೇಶ್ವರ ರಾವ್ ಮತ್ತು ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ನಡೆಸಿತು. ಪ್ರತಿವಾದಿಗಳ ಪರವಾಗಿ ಹಾಜರಾಗಿದ್ದ ವಕೀಲ ದೇವದತ್ ಕಾಮತ್ ವಿಡಿಯೊ ಕಾನ್ಸರೆನ್ಸ್ ಮೂಲಕ ಹಾಜರಾಗಿ ವಿಚಾರಣೆ ಮುಂದೂಡುವಂತೆ ಕೋರಿದರು. ಇದನ್ನು ಪರಿಗಣಿಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ನ.20ಕ್ಕೆ ಮುಂದೂಡಿತು