ಕುಂದಾಪುರ : ಮೂಡಕಟ್ಟೆ ಬಿ.ಎಂ.ಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಆಶ್ರಯದಲ್ಲಿ ಪ್ರಥಮ ಬಾರಿಗೆ ಹೊಸತನವನ್ನು ಪರಿಚಯಿಸುವ ಮತ್ತು ಪಿಯುಸಿ. ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ರಾಜ್ಯ ಮಟ್ಟದಲ್ಲಿ ವೇದಿಕೆ ಕಲ್ಪಿಸುವ ಉದ್ದೇಶದಿಂದ ‘ನವೋಶ್ಮೇಶ್ – 20024 ರಾಜ್ಯ ಮಟ್ಟದ ಫೆಸ್ಟ್ ನ.16ರಂದು ಕಾಲೇಜಿನ ವಠಾರದಲ್ಲಿ ಅಯೋಜಿಸಲಾಗಿದೆ ಎಂದು ಐಎಂಜೆ ವಿದ್ಯಾಸಂಸ್ಥೆಗಳ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ.ರಾಮಕೃಷ್ಣ ಹೆಗ್ಡೆ ಹೇಳಿದರು.
ಕುಂದಾಪುರ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪಿಯು ಕಾಲೇಜುಗಳು ಪಾಲ್ಗೊಳ್ಳುತ್ತಿದ್ದಾರೆ ಎಂದರು. ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರತಿಭಾ ಎಂ.ಪಟೇಲ್ ಮಾತನಾಡಿ, ಕಾರ್ಯಕ್ರಮವನ್ನು ಉದ್ಯಮಿ ಆನಂದ ಸಿ.ಕುಂದರ್ ಉದ್ಘಾಟಿಸಲಿದ್ದು ಉಡುಪಿ ನೇವಿಯಸ್ ಸೊಲ್ಯುಷನ್‌ನ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಸುಯೋಗ್ ಶೆಟ್ಟಿ ಮತ್ತು ಚಲನಚಿತ್ರ ನಟಿ ವಿದುಷಿ ಮಾನಸಿ ಸುಧಾಕರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದಾರೆ ಸಂಸ್ಥೆಯ ಅಧ್ಯಕ್ಷ ಸಿದ್ದಾರ್ಥ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಹಾಗೂ ಸಂಜೆ ಸಮಾರೋಪ ನಡೆಯಲಿದೆ ಎಂದರು.
ಫೆಸ್ಟ್ ಸಂಯೋಜಕಿ ಅರ್ಚನಾ ಗದ್ದೆ ಮಾತನಾಡಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಿಂದ ಪಿಯು ಕಾಲೇಜುಗಳ ಸುಮಾರು 800 ಮಿಕ್ಕಿ ವಿದ್ಯಾರ್ಥಿಗಳು ನೊಂದಣಿ ಮಾಡಿಸಿಕೊಂಡಿದ್ದಾರೆ. ಫೆಸ್ಟ್ ನಲ್ಲಿ ಭಾಗವಹಿಸುವವರು ನೊಂದಣಿಗೆ ಅವಕಾಶವಿದ್ದು, ಹೊರ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಸುಮಾರು 1500 ಮಿಕ್ಕಿ ವಿದ್ಯಾರ್ಥಿಗಳ ನೊಂದಣಿ ನಿರೀಕ್ಷಿಸಲಾಗಿದೆ. ಪ್ರತಿ ವಿದ್ಯಾರ್ಥಿಗಳಿಂದ 50 ರೂ. ನೊಂದಣಿ ಶುಲ್ಕ ಸಂಗ್ರಹಿಸಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಮತ್ತು ನೊಂದಣಿಗಾಗಿ 9380773435 ಅಥವಾ 9480284956 ಸಂಪರ್ಕಿಸಬಹುದು ಎಂದರು. ಕಾಲೇಜಿನ ಉಪಪ್ರಾಂಶುಪಾಲ ಕುಮಾರ್ ಉಪಸ್ಥಿತರಿದ್ದರು.