ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 142 ದಿನಗಳ ಹಿಂದೆ ಜೈಲು ಸೇರಿದ್ದ ನಟ ದರ್ಶನ್‌ಗೆ ಬೆನ್ನುಹುರಿ ಸಮಸ್ಯೆಗೆ ಶಸ್ತ್ರಚಿಕಿತ್ಸೆ ಪಡೆಯಲು 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಬುಧವಾರ ಆದೇಶಿಸಿದೆ. ಇದರ ಬೆನ್ನಲ್ಲೇ ಅವರು ಬಳ್ಳಾರಿ ಜೈಲಿನಿಂದ ಬಿಡುಗಡೆ ಆಗಿ ಬೆಂಗಳೂರಿಗೆ ಬಂದಿದ್ದಾರೆ.
ಪ್ರಕರಣ ಸಂಬಂಧ ಜಾಮೀನು ಕೋರಿ ನಟ ದರ್ಶನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಜೊತೆಗೆ ಬೆನ್ನು ಹುರಿ ಸಮಸ್ಯೆಗೆ ಶಸ್ತ್ರಚಿಕಿತ್ಸೆ ಮಾ ಡಿಸಿಕೊಳ್ಳಲು ಮಧ್ಯಂತರ ಜಾಮೀನು ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು.
ಬಳ್ಳಾರಿಯ ವೈದ್ಯಕೀಯ ಮತ್ತು ಸಂಶೋ ಧನಾ ಸಂಸ್ಥೆಯ (ಬಿಎಂಸಿಆರ್‌ಸಿ) ನ್ಯೂರೋ ಸರ್ಜರಿ ವಿಭಾಗದ ಮುಖ್ಯಸ್ಥ ಡಾ.ಎಸ್.ವಿಶ್ವನಾಥ ಮತ್ತು ಫಿಸಿಯೋಥೆರಪಿಸ್ಟ್ ಎಂ.ವೆಂಕಟ ರೆಡ್ಡಿ ಅವರು ತಪಾಸಣೆ ನಡೆಸಿ ನೀಡಿರುವ ವರದಿ ಆಧರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು, ದರ್ಶನ್‌ಗೆ 6 ವಾರಗಳ ಜಾಮೀನು ನೀಡಿದ್ದಾರೆ. ಹಾಗೆಯೇ, ದರ್ಶನ್ ತಮ್ಮದೇ ಖರ್ಚಿನಲ್ಲಿ ಬೆಂಗಳೂರಿನಲ್ಲಿ ಇಚ್ಚಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ಆದೇಶಿಸಿದೆ. ಈ ಆದೇಶದಿಂದ ಬಂಧನಕ್ಕೆ ಒಳಗಾಗಿ 142 ದಿನ (ಸುಮಾರು ನಾಲ್ಕೂವರೆ ತಿಂಗಳ) ನಂತರ ದರ್ಶನ್ ಜೈಲಿಂದ. ಬಿಡುಗಡೆಯಾಗಿದ್ದಾರೆ.