Home » ಬೆಂಗಳೂರಿನಲ್ಲಿ ನಡ್ಡಾ : ಇಂದು ರಾಜ್ಯ ಬಿಜೆಪಿ ನಾಯಕರ ಭೇಟಿ
 

ಬೆಂಗಳೂರಿನಲ್ಲಿ ನಡ್ಡಾ : ಇಂದು ರಾಜ್ಯ ಬಿಜೆಪಿ ನಾಯಕರ ಭೇಟಿ

by Kundapur Xpress
Spread the love

ಬೆಂಗಳೂರು : ಸಪಕ್ಷದಲ್ಲಿನ ಬಣ ರಾಜಕೀಯ ಮತ್ತು ಭಿನ್ನಮತ ಚಟುವಟಿಕೆಗಳ ಬಗ್ಗೆ ಶುಕ್ರವಾರ ರಾಜ್ಯ ನಾಯಕರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಅಧಿಕೃತ ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಂಬಂಧ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ ನಡ್ಡಾ ಅವರು ಶುಕ್ರವಾರ ಕಾರ್ಯಕ್ರಮ ಮುಗಿದ ಬಳಿಕ ಸಮಾರು ಎರಡು ಗಂಟೆಗಳ ಕಾಲ ಕುಮಾರಕೃಪ ಅತಿಥಿಗೃಹದಲ್ಲಿ ತಂಗಲಿದ್ದಾರೆ. ಈ ವೇಳೆ ವಿವಿಧ ರಾಜ್ಯ ನಾಯಕರು ಪ್ರತ್ಯೇಕವಾಗಿ ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯ ಘಟಕದಲ್ಲಿನ ಗೊಂದಲಗಳನ್ನು ಬಗೆಹರಿಸುವಂತೆ ಮನವಿ ಮಾಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ಬುಧವಾರವಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿಗೆ ತೆರಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದ ಬೆಳವಣಿಗೆಗಳ ವಿವರಿಸಿದ್ದರು. ಜತೆಗೆ ಭಿನ್ನಮತೀಯ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಅವರ ಬಣದ ವಿರುದ್ಧ ದೂರು ನೀಡಿದ್ದರು. ಅದರ ಬೆನ್ನಲ್ಲೇ ಪೂರ್ವ ನಿಗದಿತ ಕಾರ್ಯ ಕ್ರಮದ ಹಿನ್ನೆಲೆಯಲ್ಲಿ ನಡ್ಡಾ ಬೆಂಗಳೂರಿಗೆ ಆಗಮಿಸುತ್ತಿದ್ದುದರಿಂದ ವಿಜಯೇಂದ್ರ ದೆಹಲಿಯಿಂದ ವಾಪಸಾದರು. ರಾತ್ರಿ ನಡ್ಡಾ ಅವರನ್ನು ಬರಮಾಡಿಕೊಂಡರು. ಶುಕ್ರವಾರ ಅಧಿಕೃತ ಕಾರ್ಯಕ್ರಮದ ಬಳಿಕ ಕೆಲಹೊತ್ತು ಸಮಯ ಇರುವುದರಿಂದ ನಡ್ಡಾ ತಮ್ಮನ್ನು ಭೇಟಿಯಾಗಲು ಆಗಮಿಸುವ ಪಕ್ಷದ ನಾಯಕರೊಂದಿಗೆ ಔಪಚಾರಿಕ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.

 

Related Articles

error: Content is protected !!