94
ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಜೆಡಿಎಸ್‌ನಿಂದ ಫ್ರೀಡಂ ಪಾರ್ಕ್‌ನಲ್ಲಿ ‘ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎನ್ನುವ ಘೋಷಣೆ ಕೂಗುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗ್ಯಾರಂಟಿ ಪಡೆದ ಪಾಪಕ್ಕೆ ಜನರು ದಿನನಿತ್ಯ ಬೆಲೆ ಏರಿಕೆ ಬರೆಗೆ ತುತ್ತಾಗುತ್ತಿದ್ದಾರೆ. ನಿತ್ಯ ದರ ಏರಿಕೆ ಮಾಡುತ್ತಿದ್ದಾರೆ. ಕೊಟ್ಟಿದ್ದು ಅಲ್ಲ, ಜನರ ಮೇಲೆ ಬೆಟ್ಟದಷ್ಟು ಹೇರಿಕೆ ಮಾಡಿದ್ದಾರೆ. ಇದನ್ನು ಸಹಿಸುವ ಅಗತ್ಯ ಇಲ್ಲ. ಜನರು ಸರ್ಕಾರದ ವಿರುದ್ಧ ದಂಗೆ ಏಳದೇ ಬೇರೆ ದಾರಿ ಇಲ್ಲ ಎಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಜೆಡಿಎಸ್ ಶಾಸಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

