Home » ನ್ಯಾಯಾಂಗ ತನಿಖೆಗೆ ಸಿಎಂ ಆದೇಶ
 

ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

by Kundapur Xpress
Spread the love

ಬೆಂಗಳೂರು : ಆರ್‌ಸಿಬಿ ಗೆಲುವಿನ ಸಂಭ್ರಮಾ ಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತ ಪಟ್ಟು 40ಕ್ಕೂ ಹೆಚ್ಚು ಮಂದಿ ಗಾಯ ಗೊಂಡಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ವಹಿಸಿದೆ. ಅಲ್ಲದೆ, ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರು. ಪರಿಹಾರ ಘೋಷಿಸಿದೆ.

ಘಟನೆ ಬಳಿಕ ಅಧಿಕೃತ  ಕಾವೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್‌ನವರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಗೆಲುವಿನ ವಿಜಯೋತ್ಸವ ಕಾರ್ಯಕ್ರಮದ ವೇಳೆ ಬಹುದೊಡ್ಡ ಅನಿರೀಕ್ಷಿತ ದುರಂತ ನಡೆದಿದೆ. ಇಂತಹ  ದುರಂತ ನಡೆಯಬಾರದಿತ್ತು ನಡೆದು ಹೋಗಿದೆ ಎಂದು ಹೇಳಿದರು

 

Related Articles

error: Content is protected !!