73
ಶಿವಮೊಗ್ಗ : ರಾಜ್ಯ ಸರ್ಕಾರ ಮುಸ್ಲಿಮರಿಗೆ ಗುಲಾಮವಾಗಿದ್ದು, ಇವರ ದೋರಣೆ ನೋಡುತ್ತಿದ್ದರೆ ಸಿಎಂ, ಡಿಸಿಎಂ ತಮ್ಮ ಅಧಿಕಾರಾವಧಿಯಲ್ಲಿ ಮುಸ್ಲಿಮರಿಗೆ ರಾಜ್ಯವನ್ನು ಮಾರುವಂತೆ ಕಾಣುತ್ತಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಧರ್ಮಾಧಾರಿತ ಮೀಸಲಾತಿಯನ್ನು ನೀಡಬಾರದೆಂದು ಸಂವಿಧಾನವೇ ಹೇಳಿದೆ. ಆದರೆ, ಸಂವಿಧಾನದ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವ ಕಾಂಗ್ರೆಸ್ಸಿಗರು ಹಿಂದುಳಿದವರಿಗೆ, ದಲಿತರಿಗೆ ವಂಚಿಸಿ ಮುಸ್ಲಿಮರಿಗೆ ವಸತಿ ಯೋಜನೆಯೂ ಸೇರಿದಂತೆ ವಿವಿಧ ಕಾಮಗಾರಿಗಳಲ್ಲಿ ಮೀಸಲಾತಿ ನೀಡಿ ಹೆಚ್ಚಿಸಿದೆ. ಈ ಮೂಲಕ ದಲಿತರಿಗೆ ಕಾಂಗ್ರೆಸ್ ದ್ರೋಹ ಮಾಡುತ್ತಿದೆ. ಇದನ್ನು ಹಿಂದೂ ಸಮಾಜ ಒಪ್ಪುವುದಿಲ್ಲ ಎಂದರು.

