Home » ಕನ್ನಡ ಅವಹೇಳನ ಮಾಡಿದರೆ ಕಠಿಣ ಕ್ರಮ
 

ಕನ್ನಡ ಅವಹೇಳನ ಮಾಡಿದರೆ ಕಠಿಣ ಕ್ರಮ

ಸಿ ಎಂ ಸಿದ್ದರಾಮಯ್ಯ

by Kundapur Xpress
Spread the love

ಬೆಂಗಳೂರು : ನಮ್ಮ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗರ ಆದ್ಯ ಕರ್ತವ್ಯವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಮತ್ತು ಕನ್ನಡಿಗರಿಗೆ ಹೀಯಾಳಿಸುವವರ ವಿರುದ್ಧ ಮುಲಾಜಿಲ್ಲದೇ ನಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ನಗರದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ನಾಡದೇವಿ ಭುವನೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿ ಹಾಗೂ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕನ್ನಡಕ್ಕೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಹಾಗಾಗಿಯೇ, ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿದೆ. ಕನ್ನಡವನ್ನು ವ್ಯವಹಾರಿಕ ಭಾಷೆಯಾಗಿ ಬಳಸುವ ಜತೆಗೆ ಇತರರ ಜತೆಗೂ ಕನ್ನಡದಲ್ಲಿಯೇ ಮಾತನಾಡುತ್ತೇವೆ ಎಂದು ಕನ್ನಡಿಗರಾಗಿ ಶಪಥ ಮಾಡಬೇಕು ಎಂದರು

ಪರ ಭಾಷಿಗರಿಗೂ ಕನ್ನಡ ಕಲಿಸುವ ಪ್ರಯತ್ನ ಮಾಡಬೇಕು. ಕನ್ನಡ ನೆಲದ ನೀರು, ಗಾಳಿ, ಆಹಾರ ಸೇವಿಸಿದ ಮೇಲೆ ಅವರು ಯಾವುದೇ ಭಾಷಿಗರಾಗಿರಲಿ, ಜಾತಿಯವರಾಗಿರಲಿ, ಧರ್ಮದವರಾಗಲಿ ಕನ್ನಡಿಗರೇ ಆಗಿರುತ್ತಾರೆ ಎಂದು ಹೇಳಿದರು. –

   

Related Articles

error: Content is protected !!