Home » ದೆಹಲಿಯಲ್ಲಿ ಕರ್ನಾಟಕ ಭವನ ಉದ್ಘಾಟಿಸಿದ ಮುಖ್ಯಮಂತ್ರಿ
 

ದೆಹಲಿಯಲ್ಲಿ ಕರ್ನಾಟಕ ಭವನ ಉದ್ಘಾಟಿಸಿದ ಮುಖ್ಯಮಂತ್ರಿ

by Kundapur Xpress
Spread the love

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪುನರ್ ನಿರ್ಮಾಣ ಗೊಂಡಿರುವ ಕರ್ನಾಟಕ ಭವನ, ಕೇಂದ್ರ ಹಾಗೂ ರಾಜ್ಯದ ನಡುವೆ ರಾಯಭಾರ ಕಚೇರಿಯಾಗಿ ಕೆಲಸ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಾಭಾವ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ 138 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಕರ್ನಾಟಕ ಭವನವನ್ನು ಬುಧವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು. ಈ ಹಿಂದೆ ಇದು ಮೈಸೂರು ಭವನವಾಗಿತ್ತು. ದೆಹಲಿಯಲ್ಲಿ ಒಟ್ಟು ಮೂರು ಕರ್ನಾಟಕ ಭವನಗಳು ಇವೆ.

ಸುಭದ್ರ ರಾಜ್ಯ ನಿರ್ಮಾಣದಲ್ಲಿ ಎಲ್ಲರ ಭಾಗವಹಿಸುವಿಕೆ ಅಗತ್ಯವಾಗಿದ್ದು, ಕೇಂದ್ರ ಸರ್ಕಾರದ ಬಳಿ ಹಲವು ಕೆಲಸ ಕಾರ್ಯ ಗಳಿಗಾಗಿ ಅಧಿಕಾರಿಗಳು, ಸಚಿವರು, ಶಾಸಕರು ದೆಹಲಿಗೆ ಬರಬೇಕಾಗು ತ್ದೆ. ಇವರೆಲ್ಲರಿಗೂ ಕರ್ನಾಟಕ ಭವನ ತಂಗಲು ಸಹಾಯವಾಗುತ್ತದೆ ಎಂದರು. ಅಲ್ಲದೆ, ಕರ್ನಾಟಕ ಭವನ-2ರ ಪುನರ್‌ ನಿರ್ಮಾಣ ಮಾಡುವ ಯೋಜನೆಯೂ ಇದೆ ಎಂದು ಅವರು ತಿಳಿಸಿದರು

 

Related Articles

error: Content is protected !!