Home » ಸಿಎಂ ಸಿದ್ದರಾಮಯ್ಯ ಇಂದು ದೆಹಲಿಗೆ
 

ಸಿಎಂ ಸಿದ್ದರಾಮಯ್ಯ ಇಂದು ದೆಹಲಿಗೆ

by Kundapur Xpress
Spread the love

ಬೆಂಗಳೂರು : ಇಂದು ಮಂಗಳವಾರ ದಿಲ್ಲಿಗೆ ತೆರಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದು, ರಾಜ್ಯದ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ರಾಜಕೀಯ ಬೆಳವಣಿಗಳ ಬಗ್ಗೆ ವರಿಷ್ಠರಿಗೆ ವರದಿ ಒಪ್ಪಿಸಲಿದ್ದಾರೆ.

ಈಗಾಗಲೇ ಡಿಸಿಎಂ ಡಿ.ಕೆ. ಶಿವಕುಮಾರ್ ದಿಲ್ಲಿಯಲ್ಲೇ ಇದ್ದು, ಸಿಎಂ ಜತೆಗೆ ಕೆಲವು ಸಚಿವರು ಸಹ ದಿಲ್ಲಿಗೆ ತೆರಳಲಿದ್ದಾರೆ. ಗೃಹ ಖಾತೆ ಮತ್ತು ಇತರ ಕೆಲ ಖಾತೆಗಳ ಬದಲಾವಣೆ ಸೇರಿದಂತೆ ರಾಜ್ಯ ಸರ್ಕಾರಕ್ಕೆ ಹೊಸ ರೂಪ ನೀಡಲು ಸಂಪುಟ ಪುನರ್ ರಚನೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ದಿಲ್ಲಿ ಭೇಟಿಯ ಸಂದರ್ಭದಲ್ಲಿ ರಾಜ್ಯದ ವಿವಿಧ ಯೋಜನೆಗಳ ಕುರಿತು ಕೇಂದ್ರ ಸಚಿವರನ್ನುಸಹ ಮುಖ್ಯಮಂತ್ರಿಗಳು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

Related Articles

error: Content is protected !!