ಬೆಂಗಳೂರು : ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕರ್ನಾಟಕ ಹಾಗೂ ಭಾರತವನ್ನು ಪ್ರತಿನಿಧಿಸಿ ಪದಕ ವಿಜೇತರಾಗಿರುವ ಪ್ರತಿಭಾವಂತ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು ಸಹಾಯಕ ನಿರ್ದೇಶಕರ ಮಟ್ಟದ ಹುದ್ದೆಗಳನ್ನು ನಿಗದಿ ಪಡಿಸಿದೆ. ಈ ಮೂಲಕ ರಾಜ್ಯದ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ರಾಜ್ಯವನ್ನು ಹಾಗೂ ದೇಶವನ್ನು ಪ್ರತಿನಿಧಿಸಿರುವ ಪದಕ ವಿಜೇತರಿಗೆ ಕ್ರೀಡಾ ಇಲಾಖೆಯಲ್ಲಿ ಸಹಾಯಕ ನಿರ್ದೇಶಕ ಸೇರಿದಂತೆ ವಿವಿಧ ಹುದ್ದೆಗಳನ್ನು ನಿಗದಿಪಡಿಸಿ ಸರ್ಕಾರ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ
ಈ ಹಿಂದೆ ಸಿఎం ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಕ್ರೀಡೆಯಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ವಿವಿಧ ಇಲಾಖೆಗಳಲ್ಲಿ ಕೆಲಸ ನೀಡುವ ಸಂಬಂಧ ಮೀಸಲಾತಿ ಕಲ್ಪಿಸಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. ಅದರಂತೆ ಈಗ ಕ್ರೀಡಾ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಹುದ್ದೆಗಳನ್ನು ಹಾಗೂ ವೇತನ ಶ್ರೇಣಿಯನ್ನು ನಿಗದಿ ಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.