Categories
ರಾಜ್ಯ ಸುದ್ದಿ

ಖರ್ಗೆಯೊಂದಿಗೆ ಸಿದ್ದು ಸಮಾಲೋಚನೆ

ಬೆಂಗಳೂರು : ಸಚಿವ ಸಂಪುಟ ಪುನರ್‌ರಚನೆ ಹಾಗೂ ವಿಧಾನಪರಿಷತ್‌ನ ಖಾಲಿ ಸ್ಥಾನಗಳ ನೇಮಕದ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಭಾನುವಾರ ಮಹತ್ವದ ಚರ್ಚೆ ನಡೆಸಿದ್ದು, ಅಂತಿಮ ಹಂತದ ಚರ್ಚೆಗೆ ಮುಂದಿನ ವಾರ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಇದೇ ವೇಳೆ ಸಚಿವ ಸಂಪುಟ ಪುನಾರಚನೆ ವಿಚಾರವಾಗಿಯೂ ಚರ್ಚಿಸಿದ್ದು ಏಪ್ರಿಲ್ ತಿಂಗಳಿನಲ್ಲಿ ಪುನರ್‌ರಚನೆ ಪ್ರಕ್ರಿಯೆ ನಡೆಸುವ ಬಗ್ಗೆ ಚರ್ಚೆಯಾಗಿದೆ. ಸಂಪುಟದಿಂದ ಐದಾರು ಮಂದಿ ಸಚಿವರನ್ನು ಕೈ ಬಿಟ್ಟು ಆ ಜಾಗಕ್ಕೆ ಬೇರೆಯವರನ್ನು ತೆಗೆದುಕೊಳ್ಳುವ ಬಗ್ಗೆ ಚರ್ಚೆಯಾಗಿದೆ. ಯಾರನ್ನು ಕೈಬಿಡಬೇಕು ಹಾಗೂ ಹೊಸದಾಗಿ ಸಂಪುಟಕ್ಕೆ ಯಾರನ್ನು ಸೇರಿಸಿ ಕೊಳ್ಳಬೇಕು ಎನ್ನುವ ಬಗ್ಗೆ ಅಂತಿಮ ಹಂತದ ಚರ್ಚೆ ನಡೆಸಲು ಮುಂದಿನ ವಾರ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿ ದ್ದಾರೆ ಎಂದು ಮೂಲಗಳು ತಿಳಿಸಿವೆ