Home ರಾಜ್ಯ ಸುದ್ದಿಖೋ ಖೋ ಸಾಧಕರಿಗೆ ಸಿ ಎಂ 5 ಲಕ್ಷ

ಖೋ ಖೋ ಸಾಧಕರಿಗೆ ಸಿ ಎಂ 5 ಲಕ್ಷ

by Kundapur Xpress

ಬೆಂಗಳೂರು : 2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್ ನಲ್ಲಿ ಗೆದ್ದ ಭಾರತ ತಂಡಗಳಲ್ಲಿದ್ದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ. ಗೌತಮ್ ಹಾಗೂ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರಬೂರಿನ ಚೈತ್ರಾ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು. ಜೊತೆಗೆ ಇಬ್ಬರಿಗೂ ತಲಾ 5 ಲಕ್ಷ ರು. ಬಹುಮಾನ ಘೋಷಿಸಿ, ಕ್ರೀಡಾ ಬದುಕು ಮತ್ತಷ್ಟು ಯಶಸ್ಸುಗಳಿಂದ ಕೂಡಿರಲಿ ಎಂದು ಶುಭ ಕೋರಿದರು.

Related Articles