116
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಸೋಮವಾರ ಇಡೀ ದಿನ ಹಲವಾರು ನಾಟಕೀಯ ಬೆಳವಣಿಗೆಗಳು ನಡೆದವು. ಅಂತಿಮವಾಗಿ ಸಚಿವ ರಾಜಣ್ಣ ಅವರಿಂದ ರಾಜೀನಾಮೆ ಪಡೆದಿರುವ ಕುರಿತು, ಮುಖ್ಯಮಂತ್ರಿಗಳು ರಾಜ್ಯಪಾಲರ ಕಚೇರಿಗೆ ಮಾಹಿತಿ ರವಾನಿಸಿದ್ದರು. ಅದರ ಬೆನ್ನಲ್ಲೇ, ರಾಜ್ಯಪಾಲರ ವಿಶೇಷಾಧಿಕಾರಿ ಪ್ರಭುಶಂಕರ್ ಅವರು, ಈ ಸಂಬಂಧ ರಾಜ್ಯಪಾಲರ ನಿರ್ಧಾರವನ್ನು ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಮುಖೇನ ಗಮನಕ್ಕೆ ತಂದಿದ್ದಾರೆ.
ಎಲ್ಲರ ಬಗ್ಗೆಯೂ ನೇರವಾಗಿ ಮಾತನಾಡುವ ಸಚಿವ ಕೆ.ಎನ್.ರಾಜಣ್ಣ ಅವರ ರಾಜೀನಾಮೆಗೆ ರಾಹುಲ್ ಗಾಂಧಿ ಅವರ ಹೋರಾಟಕ್ಕೆ ವಿರುದ್ಧವಾಗಿ ಮಾತನಾಡಿದ್ದೇ ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಕೆ.ಎನ್.ರಾಜಣ್ಣ ಅವರಿಂದ ರಾಜೀನಾಮೆ ಪಡೆದುಕೊಳ್ಳಲಾಗಿದೆ.

