ಹುಬ್ಬಳ್ಳಿ : ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಇರುವೆಡೆ ವಕ್ಸ್ ಬೋರ್ಡ್ ಮೂಲಕ ರೈತರ ಆಸ್ತಿ ಕಬಳಿಸಲು ಸಂಚು ನಡೆದಿದೆ. ವಕ್ಸ್ ಆಸ್ತಿ ಕಬಳಿಸಲು ಅಲ್ಲಾಹುನನ್ನು ಮುಂದಿಡುತ್ತಿದೆ. ಆದರೆ, ಅಲ್ಲಾ ಆಸ್ತಿ ಕಬಳಿಸಿ ಎಂದಿಲ್ಲ ಅಲ್ಲಾ ಹೆಸರಲ್ಲಿ ಎಲ್ಲಾ ಬೋಗಸ್ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದ್ದಾರೆ. ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ಕೆಲ ರಾಜ್ಯ ಗಳಲ್ಲಿ ವಿಧಾನಸಭೆ ಚುನಾವಣೆ ಇರದಿದ್ದರೆ ವಕ್ಸ್ ಬೋರ್ಡ್ ಮೂಲಕ ಆಸ್ತಿ ಕಬಳಿಸಿ ತಮ್ಮ ತಮ್ಮ ಹೆಸರಿಗೆ ಮಾಡಿಕೊಳ್ಳುವ ತರಾತುರಿಯಲ್ಲಿದ್ದಾರೆ ಎಂದರು.
ರೈತರ, ಹಿಂದೂಗಳ, ಬಡ ಮುಸ್ಲಿಮರ ಮತ್ತು ದೇವಸ್ಥಾನಗಳ ಆಸ್ತಿ ವಶಪಡಿಸಿಕೊಳ್ಳಲು ಅದೇನು ಇವರಪ್ಪಂದೇ? ಎಂದು ಕಿಡಿಕಾರಿದರು. 2013ರಲ್ಲಿ ವಕ್‌ಗೆ ಅಪರಿಮಿತವಾದಂತ ಅಧಿಕಾರ ಕೊಟ್ಟಿದ್ದಾರೆ. ರೈತರ, ದೇವಸ್ಥಾನಗಳ ಆಸ್ತಿ ವಕ್ಸ್ ಗೆ ಕೊಡಲು ಇವರ್ಯಾರು ? ಈ ಬಗ್ಗೆ ತನಿಖೆ ನಡೆಸಬೇಕಿಸಬೇಕಿದೆ.
40-50 ವರ್ಷಗಳಿಂದ ಉಳುಮೆ ಮಾಡುತ್ತಿರುವ ರೈತರ ಜಮೀನನ್ನು ವಕ್ಸ್ ಗೆ ಕೊಡಲು ಇವರಿಗೆ ಅಧಿಕಾರ ಕೊಟ್ಟವರು ಯಾರು ಎಂದು ಅವರು ಪ್ರಶ್ನಿಸಿದರು