Home » ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್
 

ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್

4000 ಲ್ಯಾಪ್‌ಟಾಪ್ ಖರೀದಿ ಪ್ರಕ್ರಿಯೆ

by Kundapur Xpress
Spread the love

ಬೆಂಗಳೂರು‌ : ಇನ್ನೂ ಉತ್ತಮವಾಗಿ ಕಾರ್ಯನಿರ್ವಹಿಸಲು ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಒದಗಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ನಾಲ್ಕು ಸಾವಿರ ಲ್ಯಾಪ್‌ಟಾಪ್ ಖರೀದಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಬಿಜೆಪಿಯ ಎಸ್. ಕೇಶವಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2024-25ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ ‘ಡಿಜಿ-ಕಂದಾಯ’ ಯೋಜನೆಯಡಿ ಲ್ಯಾಪ್ ಟಾಪ್ ನೀಡಲಾಗುವುದು ಎಂದರು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಒದಗಿಸುವ ಚಾವಡಿಗಳು ಕಂದಾಯ ಇಲಾಖೆಯ ಸುಪರ್ದಿಗೆ ಸೇರಿರುತ್ತದೆ. ಇವುಗಳ ಪುನರ್ ನಿರ್ಮಾಣ ಮಾಡಲು ಪರಿಶೀಲಿಸಲಾಗುವುದು, ಗ್ರಾಮ ಆಡಳಿತ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಸ್ಥಳಗಳಲ್ಲಿ ದಾಖಲೆ ಇಟ್ಟುಕೊಳ್ಳಲು ಕಪಾಟುಗಳು ಹಾಗೂ ಲೇಖನ ಸಾಮಗ್ರಿಗಳನ್ನು ನೀಡಲಾಗುತ್ತಿದೆ. ಜೊತೆಗೆ ಪ್ರಯಾಣ ಭತ್ಯೆಗಳನ್ನು ಒದಗಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

 

Related Articles

error: Content is protected !!