126
ಬೆಳಗಾವಿ : ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಈಗಾಗಲೇ ಹೇಳಿದ್ದೇವೆ. ತಾಪಂ ಮೂಲಕ ಬಿಡುಗಡೆ ಮಾಡುವುದರಿಂದ ತಡವಾಗಿದೆ. ಯಾವುದೇ ಗೃಹಲಕ್ಷ್ಮಿಯರು ವಿಚಾರ ಮಾಡುವ ಪ್ರಮೇಯ ಇಲ್ಲ. ಬರುವ 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಆಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ.3ರಂದು ಬಜೆಟ್ ಅಧಿವೇಶನದಲ್ಲಿ ಭಾಗಿ ಆಗಬೇಕು ಎನ್ನುವ ಆಸೆ ಇದೆ. ನಾಳೆ ಸಿಟಿ ಸ್ಕ್ಯಾನ್ ಮಾಡಿಸಲು ಆಸ್ಪತ್ರೆಗೆ ಹೋಗುತ್ತಿದ್ದೇನೆ. ಪ್ರಯಾಣ ಮಾಡಲು ವೈದ್ಯರು ಅನುಮತಿ ನೀಡಿದರೆ ಮತ್ತೆ ಕರ್ತವ್ಯಕ್ಕೆ ಮರಳುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

