115
ಬೆಂಗಳೂರು : ಗೃಹ ಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳಿಗೆ ತಲುಪುವುದು ಸ್ವಲ್ಪ ವಿಳಂಬವಾಗಿತ್ತು. ಈಗ ಎಲ್ಲವೂ ಸರಿಯಾಗಿದ್ದು, 2 ತಿಂಗಳ ಬಾಕಿ ಹಣ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ಯೋ ಜನೆಯ ಫಲಾನುಭವಿಗಳನ್ನು ಜರಡಿ ಹಿಡಿದು ಕಡಿಮೆ ಮಾಡುವ ಪ್ರಸ್ತಾಪ ನಮ್ಮ ಮುಂದಿಲ್ಲ. ಈ ಬಗ್ಗೆ ಗೊಂ ದಲ ಬೇಡ. 5 ವರ್ಷವೂ ಯೋಜನೆಯ ಹಣ ಫಲಾ ನುಭವಿಗಳಿಗೆ ತಲುಪಲಿದೆ ಎಂದು ವಿಶ್ವಾಸ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಯವರ ಟೀಕೆಗೆ ಪ್ರತಿಕ್ರಿಯಿಸಿದ ಹೆಬ್ಬಾಳ್ವರ್, ಸರ್ಕಾರದ ಗ್ಯಾರಂಟಿ ಯೋಜನೆಗಳು ಎಷ್ಟು ಜನರಿಗೆ ತಲುಪಿವೆ ಎನ್ನುವುದನ್ನು ಅವರು ಅವಲೋಕನ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

