Home » 98 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ
 

98 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

by Kundapur Xpress
Spread the love

ಕೊಪ್ಪಳ: ದಶಕದ ಹಿಂದೆ ದಲಿತರು ಹಾಗೂ ಸವರ್ಣೀಯರ ನಡುವೆ ನಡೆದ ಜಾತಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಗಂಗಾವತಿ ತಾಲ್ಲೂಕಿನ ಮರಕುಂಬಿಯ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯಾಗಿದೆ. ಜೀವಾವಧಿ ಶಿಕ್ಷೆಗೆ ಒಳಗಾದ 98 ಅಪರಾಧಿಗಳಿಗೆ ತಲಾ 5 ಸಾವಿರ ರೂ. ದಂಡ ಹಾಕಲಾಗಿದೆ. ಮೂವರು ಅಪರಾಧಿಗಳಿಗೆ ತಲಾ ಎರಡು ಸಾವಿರ ದಂಡ ಹಾಗೂ ಐದು ವರ್ಷ ಶಿಕ್ಷೆ ವಿಧಿಸಿ ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನ್ಯಾಯಾಧೀಶ ಚಂದ್ರಶೇಖರ ಸಿ. ಆದೇಶ ಹೊರಡಿಸಿದ್ದಾರೆ. ಹತ್ತು ವರ್ಷದ ಹಿಂದೆ ಗಂಗಾವತಿಯಲ್ಲಿ ಸಿನಿಮಾ ನೋಡಲು ಹೋಗಿದ್ದಾಗ ಟಿಕೆಟ್ ವಿಚಾರಕ್ಕೆ ಜಗಳ ಆರಂಭವಾಗಿತ್ತು. ಇದು ಸಂಘರ್ಷಕ್ಕೆ ಕಾರಣವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 117 ಜನ ಆರೋಪಿ ಗಳ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು. ಇದರಲ್ಲಿ 101 ಜನರ ಮೇಲಿನ ಆರೋಪ ದೃಢಪಟ್ಟಿದೆ. ಒಟ್ಟು 117 ಜನ ಅಪರಾಧಿಗಳಲ್ಲಿ 101 ಜನರಿಗೆ ಶಿಕ್ಷೆಯಾಗಿದ್ದು ಇನ್ನುಳಿದ 16 ಜನರಲ್ಲಿ ಕೆಲವರು ಮೃತಪಟ್ಟಿದ್ದಾರೆ. ಐದು ವರ್ಷ ಶಿಕ್ಷೆಗೆ ಒಳಗಾಗಿರುವ ಮೂವರು ಅಪರಾಧಿಗಳು ಎಸ್.ಸಿ. ಎಸ್.ಟಿ. ವರ್ಗಕ್ಕೆ ಸೇರಿದವರಾಗಿದ್ದಾರೆ.

   

Related Articles

error: Content is protected !!