87
ಬೆಂಗಳೂರು : ಭ್ರಷ್ಟ ಅಧಿಕಾರಿಗಳ ವಿರುದ್ದ ಬೇಟೆ ಮುಂದುವರಿಸಿರುವ ಲೋಕಾಯುಕ್ತ ಪೊಲೀಸರು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇರೆಗೆ ಏಳು ಸರ್ಕಾರಿ ಅಧಿಕಾರಿಗಳಿಗೆ ಸೇರಿದ 35 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ 22.78 ಕೋಟಿಗಿಂತ ಮೌಲ್ಯದ ಹೆಚ್ಚು ಆಸ್ತಿ ಪತ್ತೆ ಹಚ್ಚಿದ್ದಾರೆ.
ಗುರುವಾರ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ಕೈಗೊಂಡ ಲೋಕಾಯುಕ್ತ ಪೊಲೀಸರು ತಡರಾತ್ರಿವರೆಗೆ ಶೋಧ ಕಾರ್ಯ ನಡೆಸಿದರು. ಬೆಂಗಳೂರಿನಲ್ಲಿ ಇಬ್ಬರು ಅಧಿಕಾರಿಗಳಿಗೆ ಸೇರಿದ ಸ್ಥಳ ಮೇಲೆ ದಾಳಿ ನಡೆಸಲಾಗಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಗಳೂರು, ವಿಜಯಪುರ, ಯಾದಗಿರಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ ಅಪಾರ ಪ್ರಮಾಣದಲ್ಲಿ ನಗದು ಸೇರಿ ಆಸ್ತಿಗಳು ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

