Home » ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
 

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಅರ್ಥಪೂರ್ಣ ಉತ್ಸವ

by Kundapur Xpress
Spread the love

ಬೆಂಗಳೂರು : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂಗವಾಗಿ ಸುಮಾರು 20 ಲಕ್ಷಕ್ಕೂ ಅಧಿಕ ಜನರು ರಾಜ್ಯದ 31 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಮಾನವ ಸರಪಳಿ ರಚಿಸಿ ಸಂವಿಧಾನದ ಪೀಠಿಕೆ ಓದುವ ಮೂಲಕ ಕರ್ನಾಟಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಸಮಾಜ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ದಾಖಲೆಯ ಕಾರ್ಯಕ್ರಮವು ಬೀದ‌ರ್ ಜಿಲ್ಲೆಯ ಬಸವ ಕಲ್ಯಾಣದಿಂದ ಚಾಮರಾಜನಗರದವರೆಗೆ ಸುಮಾರು 2,500 ಕಿ.ಮೀ ಉದ್ದದ ಮಾನವ ಸರಪಳಿಯಲ್ಲಿ ಸಾರ್ವಜನಿಕರು ಭಾಗವಹಿಸಿ ಪ್ರಜಾಪ್ರಭುತ್ವಕ್ಕೆ ಕೈ ಜೋಡಿಸಿದರು.

ಬೆಂಗಳೂರಿನಲ್ಲಿ ಉದ್ಘಾಟನೆ ಸಂದರ್ಭದಲ್ಲಿ ಪ್ರಜಾ ಪ್ರಭುತ್ವ ದಿನದ ರಾಯಭಾರಿ ಹರೇಕಳ ಹಾಜಪ್ಪ ಪೌರ ಕಾರ್ಮಿಕ ರಾದ ನಾಗಲಕ್ಷ್ಮೀ, ಮಂಜುಳ ಹಾಗೂ ತೃತೀಯ ಲಿಂಗಿ ಪ್ರಿಯಾಂಕಾ ಮತ್ತು ಇಬ್ಬರು ವಿಶಿಷ್ಟಚೇತನ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಡ-ಬಲದಲ್ಲಿ ನಿಂತು ಪ್ರಜಾಪ್ರಭುತ್ವ ದಿನವನ್ನು ಅರ್ಥಪೂರ್ಣಗೊಳಿಸಿದರು.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಮಹಾ ಮೆಟ್ಟಿಲುಗಳಲ್ಲಿ ಚಾರಿತ್ರಿಕ ಮಾನವ ಸರಪಳಿ ಉದ್ಘಾಟಿಸಿ, ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ವಿಚ್ಛಿದ್ರಕಾರಕ ದುಷ್ಟ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದು ನಿಲ್ಲುವಂತೆ ಕರೆ ನೀಡಿದರು.

   

Related Articles

error: Content is protected !!