ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಪುರುಷತ್ವ ಪರೀಕ್ಷೆಗೊಳಪಡಿಸಿದೆ. ಬೌರಿಂಗ್ ಆಸ್ಪತ್ರೆ ಆವರಣದಲ್ಲಿರುವ ಅಟಲ್ ಬಿಹಾರಿ ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಪ್ರಜ್ವಲ್ ಅವರಿಗೆ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಪರೀಕ್ಷೆ ನಡೆದಿದೆ. ಈ ಪರೀಕ್ಷಾ ವರದಿ ಇನ್ನೊಂದು ವಾರದಲ್ಲಿ ಎಸ್ಐಟಿಗೆ ಸಲ್ಲಿಕೆಯಾಗಬಹದು ಎನ್ನಲಾಗಿದೆ. ಈ ಪರೀಕ್ಷೆ ಸಂಬಂಧ ಪ್ರಜ್ವಲ್ ಅವರಿಂದ ವೀರ್ಯ, ರಕ್ತ ಮಾದರಿ ಸಂಗ್ರಹಿಸಲಾಗಿದೆ. ಇದಲ್ಲದೆ ಲೈಂಗಿಕ ಕ್ರಿಯೆ ನಡೆಸಲು ಸಾಮರ್ಥ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಇತರೆ ವೈದ್ಯಕೀಯ ಪರೀಕ್ಷೆ ಸಹ ನಡೆದಿದೆ ಎನ್ನಲಾಗಿದೆ.