Home » ಇಂದು ಯತ್ನಾಳ್‌ ಬಣದ ಸಭೆ
 

ಇಂದು ಯತ್ನಾಳ್‌ ಬಣದ ಸಭೆ

by Kundapur Xpress
Spread the love

ಬೆಂಗಳೂರು : ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದ ಮುಖಂಡರು ಶುಕ್ರವಾರ ಸಭೆ ಸೇರಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಈ ಸಭೆಯಲ್ಲಿ ಯತ್ನಾಳ್ ಅವರು ಭಾಗಿ ಯಾಗುವ ಬಗ್ಗೆ ಇನ್ನೂ ಖಚಿತ ಮಾಹಿತಿ ಹೊರ ಬಿದ್ದಿಲ್ಲ. ಪಕ್ಷದ ಶಿಸ್ತು ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಉಚ್ಚಾಟನೆಗೊಂಡಿರುವ ಕಾರಣ ಯತ್ನಾಳ್ ಅವರೊಂದಿಗೆ ಸೇರಿ ಸಭೆ ನಡೆಸಿದರೆ ವರಿಷ್ಠರ ಕೆಂಗಣ್ಣಿಗೆ ಗುರಿಯಾಬೇಕಾದೀತು ಎಂಬ ಆತಂಕವೂ ಮುಖಂಡರಲ್ಲಿದೆ. ಯತ್ನಾ ಳ್ ಉಚ್ಚಾಟನೆಯನ್ನು ವಾಪಸ್ ಪಡೆದುಕೊ ಳ್ಳುವಂತೆ ವರಿಷ್ಠರಿಗೆ ಮನವಿ ಮಾಡುವ ಬಗ್ಗೆ ಅವರ ಬಣದ ಮುಖಂಡರು ಸಮಾಲೋಚಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

 

Related Articles

error: Content is protected !!