Home » ಮೈಕ್ರೋ ಫೈನಾನ್ಸ್‌ ಕಿರುಕುಳ : ನಾಳೆ ಸಿಎಂ ಸಭೆ
 

ಮೈಕ್ರೋ ಫೈನಾನ್ಸ್‌ ಕಿರುಕುಳ : ನಾಳೆ ಸಿಎಂ ಸಭೆ

by Kundapur Xpress
Spread the love

ಬೆಂಗಳೂರು : ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಜನರ ಮೇಲಾಗುತ್ತಿರುವ ಕಿರುಕುಳ ತಪ್ಪಿಸಲು ರಾಜ್ಯ ಸರ್ಕಾರ ಮುಂದಾ ಗಿದ್ದು, ಅದಕ್ಕೆ ಸಂಬಂಧಿಸಿದಂತೆ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆದು ನಂತರ ಕಿರುಕುಳಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರ ನಡುವೆಯೇ ಹಾವೇರಿ ಮಹಿಳೆಯರು ಮಾಂಗಲ್ಯ ಉಳಿಸಿ ಅಭಿಯಾನ ಆರಂಭಿಸಿ ಮುಖ್ಯಮಂತ್ರಿಗಳಿಗೆ ಮಾಂಗಲ್ಯದ ಸರವನ್ನು ಕಳುಹಿಸಿದ್ದರು.ಹೀಗಾಗಿ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿರು ವುದನ್ನು ಮನಗಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶನಿವಾರ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ

 

Related Articles

error: Content is protected !!