ಬೆಂಗಳೂರು : ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್‌ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕುವಂತೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಯಮಬಾಹಿರವಾಗಿ ಮೈಕ್ರೋ ಫೈನಾನ್ಸ್ ಮಾಡಲು ಖಾಸಗಿ ಕಂಪನಿಗಳಿಗೆ ಅನುಮತಿ ಕೊಟ್ಟವರು ಯಾರು ? ಸರ್ಕಾರ ಅನುಮತಿ ಕೊಟ್ಟಿದೆಯಾ? ರಾಷ್ಟ್ರೀಕೃತ ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು ಸರಿಯಾದ ಯಾದ ರೀತಿಯಲ್ಲಿ ಸಾಲ ಸೌಲಭ್ಯ ನೀಡಿದರೆ ಜನ ಮೈಕ್ರೋ ಫೈನಾನ್ಸ್‌ಗಳ ಬಳಿಗೆ ಏತಕ್ಕೆ ಸಾಲ ಪಡೆಯುತ್ತಾರೆ. ಮೈಕ್ರೋ ಫೈನಾನ್ಸ್‌ಗಳನ್ನು ಮಟ್ಟ ಹಾಕಲು ಅಧಿಕಾರಿಗಳ ಬದಲು ಸರ್ಕಾರವೇ ಕಠಿಣ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.