88
ಬೆಳಗಾವಿ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಬುಧವಾರ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಎಸ್ ಸಿಎ ಹಾಗೂ ಆರ್‌ಸಿಬಿ ಫ್ರಾಂಚೈಸಿ ವತಿಯಿಂದ ತಲಾ 1 ಕೋಟಿ ಪರಿಹಾರ ನೀಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಕ್ಟರ್ ಆಗ್ರಹಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಸಿಬಿ ಸಂಭ್ರಮಾಚರಣೆ ವೇಳೆ 11 ಅಭಿಮಾನಿಗಳ ಸಾವು. ನೋವು ತಂದಿದೆ. ಆರ್‌ಸಿಬಿ ಹಾಗೂ ಕೆಎಸಿಎ ಹೆಚ್ಚಿನ ಪರಿಹಾರ ಕೊಡಬೇಕು. ಈ ಪ್ರಕರಣದಲ್ಲಿ ವಿರೋಧ ಪಕ್ಷಗಳು ಜನರ ದಾರಿ ತಪ್ಪಿಸುತ್ತಿವೆ. ನಮ್ಮ ಹಿರಿಯರು ಇದಕ್ಕೆ ತಕ್ಕ ಉತ್ತರ ಕೊಡಲಿದ್ದಾರೆ. ರಾಜಕಾರಣಕ್ಕಿಂತ ಘಟನೆ ಯಾಕೆ ಆಯಿತು ಎಂಬುದು ಗೊತ್ತಾಗಬೇಕು ಎಂದರು.

