99
ಬೆಂಗಳೂರು : ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಕರೆ ನೀಡಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯುತ್ತಮವಾಗಿ ಓದಿ, ಪರೀಕ್ಷೆ ಬರೆದಿರುವ ಆಕಾಂಕ್ಷಿಗಳು, ಸೀಟು ಪಡೆಯಲೇಬೇಕು ಎಂಬ ಆತಂಕದಿಂದ ಮೋಸದ ಜಾಲಕ್ಕೆ ಬೀಳಬಾರದು ಎಂದು ಸಲಹೆ ನೀಡಿದರು. ವೈದ್ಯಕೀಯ ಸೀಟು ಕೊಡಿಸುತ್ತೀವೆ. ಆ ಕಾಲೇಜಿನಲ್ಲಿ ಸೀಟು ಸಿಗುತ್ತೆ ನಿಮಗೆ, ನಮಗೆ ಅವರು ಗೊತ್ತಿದ್ದಾರೆ. ಇವರು ಗೊತ್ತಿದ್ದಾರೆಂದು ಹೇಳಿ ಸೀಟು ಕೊಡಿಸುವ ಭರವಸೆ ನೀಡಿ ಮರಳು ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ತಿಳಿಸಿದರು.

